Tuesday, April 20, 2021
spot_imgspot_img
spot_imgspot_img

ವಿಟ್ಲ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು

ವಿಟ್ಲ: ವಿಟ್ಲ ಕಸಬಾ ಗ್ರಾಮದ ಆಲಂಗಾರು ನಿವಾಸಿ ರಘುನಾಥ ಎಂಬವರ ತಂದೆ ಬೆಳ್ಯಪ್ಪಗೌಡ(68) ಎಂಬವರು ಸುಮಾರು 15 ವರ್ಷಗಳಿಂದ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು.

ಇತ್ತೀಚಿನ ದಿನಗಳಲ್ಲಿ ವಿಪರೀತ ಅಮಲು ಪದಾರ್ಥ ಸೇವಿಸುವ ಅಭ್ಯಾಸವನ್ನು ರೂಢಿಸಿಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದವರು ಫೆ.19 ರಂದು ರಾತ್ರಿ ತಮ್ಮ ಮನೆಯ ಬಳಿಯ ಕೊಟ್ಟಿಗೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.

ಅಸ್ವಸ್ಥಗೊಂಡ ಬೆಳ್ಯಪ್ಪಗೌಡ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಿದ್ದರು. ಫೆ.27 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾರೆ. ಅವರ ಸಾವಿನ ಬಗ್ಗೆ ಯಾವುದೇ ಸಂಶಯವಿಲ್ಲವೆಂದು ವರದಿಯಾಗಿದೆ.

- Advertisement -

MOST POPULAR

HOT NEWS

Related news

error: Content is protected !!