Saturday, April 20, 2024
spot_imgspot_img
spot_imgspot_img

ವಿಟ್ಲ: ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ

- Advertisement -G L Acharya panikkar
- Advertisement -

ವಿಟ್ಲ: ಇಂದು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು.

ಈ ವೇಳೆ ಮಾತನಾಡಿದ ಶಾಸಕರು ವಿಟ್ಲ ಪರಿಸರದಲ್ಲಿ ಕೊರೊನಾ ಪ್ರಕರಣಗಳು ಅತೀಯಾಗಿದ್ದು ಈಗಷ್ಟೇ ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ. ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಟಾಸ್ಕ್ ಫೋರ್ಸ್ ಸಮಿತಿಗೆ ನಿಯಮ ಪಾಲನೆ ಮಾಡದವರ ಮೇಲೆ ಕಾನೂನು ಕ್ರಮಕೈಗೊಳ್ಳಲು ತಿಳಿಸಿದರು. ಸರಕಾರದ ನಿಯಮಗಳನ್ನು ಪಾಲಿಸಿ, ಲಸಿಕೆ ಶೀಘ್ರವಾಗಿ ಎಲ್ಲರಿಗೂ ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರ ಬಗ್ಗೆ ಮಾಹಿತಿ ಪಡೆದು ಅವರಲ್ಲಿ ಸೊಂಕು ಲಕ್ಷಣಗಳಿದ್ದರೆ ಅವರನ್ನು ಕೋವಿಡ್ ಪರೀಕ್ಷೆ ಮಾಡಿಸಿ ಉಳಿದಂತೆ ಸಂಪರ್ಕಿತರ ಮೇಲೆ ನಿಗಾ ಇರಲಿ ಎಂದು ಆಸ್ಪತ್ರೆ ಸಿಬ್ಬಂದಿಗಳಿಗೆ ಹಾಗೂ ಆಶಾಕಾರ್ಯಕರ್ತೆಯರಿಗೆ ತಿಳಿಸಿದರು. ಗ್ರಾಮದಲ್ಲಿ ನಡೆಯುವ ಪ್ರತಿಯೊಂದು ಕೆಲಸಗಳ ವಿವರ ಹಾಗೂ ನಿಗಾ ವಹಿಸಬೇಕು ಎಂದು ಹೇಳಿದರು. ಪ್ರಸ್ತುತ ಕೊರೊನಾ ಸೊಂಕಿತ ಪ್ರಕರಣ 80ಕ್ಕೆ ಇಳಿದಿದ್ದು ಎಲ್ಲರೂ ಹೋಮ್ ಐಸೋಲೇಶನ್‌ನಲ್ಲಿದ್ದು ಆರೋಗ್ಯವಂತರಾಗಿದ್ದಾರೆ ಎಂಬುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶ್ಲಾಘಿಸಿದರು.

ಶಾಸಕ ಸಂಜೀವ ಮಠಂದೂರು ಯಾವ ರೀತಿಯಾಗಿ ಎಲ್ಲರೂ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ, ಹಾಗೇ ಯಾವುದಕ್ಕೆ ಕೊರತೆಯಿದೆ. ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲ ವಿವರಗಳನ್ನು ಆಯಾ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಪಡೆದರು.

ಪ್ರಕರಣಗಳು ನಿಯಂತ್ರಣಕ್ಕೆ ಬರಬೇಕಾದರೆ ಎಲ್ಲ ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅಪಾರವಾದದ್ದು ಹಾಗಾಗಿ ಅವರಿಗೆ ಥರ್ಮಾಮೀಟರ್, ಗ್ಲೌಸ್, ಕೊಡೆ, ಸ್ಯಾನಿಟೈಸರ್ ನೀಡಲಾಯಿತು.

ಈ ಸಭೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಟಾಸ್ಕ್ ಫೋರ್ಸ್ ಸಮಿತಿ ಅಧಿಕಾರಿಗಳು, ಆಶಾಕಾರ್ಯಕರ್ತೆಯರು, ಅಂಗನವಾಡಿಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!