Tuesday, May 14, 2024
spot_imgspot_img
spot_imgspot_img

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಆಟೋ ರಿಕ್ಷಾ..!

- Advertisement -G L Acharya panikkar
- Advertisement -

ವಿಟ್ಲ: ಕಾರೊಂದು ರಿವರ್ಸ್ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶೀಮಠ ತಿರುವಿನಲ್ಲಿ ನಡೆದಿದೆ.

ಕಾಶೀಮಠ ರಸ್ತೆ ತಿರುವಿನಲ್ಲಿ ಏಕಾಏಕಿ ಕಾರೊಂದು ಹಿಮ್ಮುಖವಾಗಿ ಚಲಿಸಿ ಬಂದ ಕಾರಣ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಇದರಿಂದ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಟೋ ಭಾಗಶಃ ಜಖಂಗೊಂಡಿದೆ.

- Advertisement -

Related news

error: Content is protected !!