Friday, June 5, 2026
spot_imgspot_img
spot_imgspot_img

ವಿಟ್ಲ : ವೀರಕಂಬದಲ್ಲಿಓಮ್ನಿ ಕಾರು ಪಲ್ಟಿ-ಮಹಿಳೆಯರು ಹಾಗೂ ಮಕ್ಕಳಿಗೆ ಗಾಯ

- Advertisement -
- Advertisement -

ವಿಟ್ಲ: ಓಮ್ನಿ ಕಾರು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ವೀರಕಂಬದಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಪರಿಣಾಮ ವೀರಕಂಬ ಗ್ರಾಮ ಪಂಚಾಯತ್ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರಳಿದೆ.

ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳಿದ್ದು, ಸಣ್ಣುಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಪಾತದ ಕೆಲಗಡೆ ಮನೆಯೊಂದು ಇದ್ದು, ಅವರ ಅಂಗಳಕ್ಕೆ ಈ ಕಾರು ಬಿದ್ದು, ಸಂಪೂರ್ಣವಾಗಿ ಜಖಂಗೊಂಡಿದೆ. ಓಮ್ನಿ ಕಾರಿನಲ್ಲಿದ್ದವರು ಮಾರಿಪಳ್ಳ ನಿವಾಸಿಗಳಾಗಿದ್ದು, ವಿಟ್ಲದ ಒಕ್ಕೆತ್ತೂರು ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷಿದರ್ಶಿಗಳು ತಿಳಿಸಿದ್ದಾರೆ.

ವಿಟ್ಲ-ಕಲ್ಲಡ್ಕ ನಡುವೆ ಇರುವ ಅಪಾಯಕಾರಿ ತಿರುವಿನಲ್ಲಿ ಪ್ರಪಾಪ ಇದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಇದೇ ಪ್ರಪಾತಕ್ಕೆ ಲಾರಿ ಉರುಳಿ ಬಿದ್ದಿತ್ತು. ಇಲ್ಲಿ ತಡೆಗೋಡೆ ನಿರ್ಮಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!