Tuesday, July 28, 2026
spot_imgspot_img
spot_imgspot_img

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ, ಪುಣಚ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ

- Advertisement -
- Advertisement -
vtv vitla
vtv vitla
vtv vitla
vtv vitla

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಪುಣಚ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಇಡ್ಕಿದು ಸೊಸೈಟಿ ಸಭಾಭವನ ಕಬಕದಲ್ಲಿ ನಡೆಯಿತು. ಬಳಿಕ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಉಪ್ಪಿನಂಗಡಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ನಡೆಯಿತು.

vtv vitla

ಕಾರ್ಯಕ್ರಮದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಜನ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡಿಸಲಾಯಿತು.

vtv vitla
vtv vitla

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಸೇರಿದಂತೆ ಹಲವು ಬಿಜೆಪಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ಸ್ವಾಗತಿಸಿ, ಪುಣಚ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್ ವಂದಿಸಿದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ ಕಾರ್ಯಕ್ರಮವನ್ನು ನಿರೂಪಿಸಿದ್ರು. ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

vtv vitla
vtv vitla
vtv vitla
- Advertisement -

Related news

error: Content is protected !!