- Advertisement -
- Advertisement -





ಮಂಗಳೂರು: ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ)ರು ಇಂದು ಪ್ರಕಟಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ 7ರಂತೆ ಒಟ್ಟು 21 ಮಂದಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಸೆ.5ರಂದು ಪ್ರಶಸ್ತಿ ಪ್ರದಾನ ಕಾರ್ಯ ನಡೆಯಲಿದೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಸೇರ್ಕಳ ಶಾಲೆಯ ಸಹಶಿಕ್ಷಕ ದಾಮೋದರ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ., ಅವರಿಗೆ ಪ್ರಶಸ್ತಿ ಬಂದಿದೆ. ವಿದ್ಯಾಶಂಕರ್ ಅವರು 32 ವರ್ಷಗಳಿಂದ ಸರಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ತರಬೇತಿ ನೀಡಿದ ಹಲವು ಕ್ರೀಡಾಪಟುಗಳು ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ.
- Advertisement -








