Wednesday, September 2, 2026
spot_imgspot_img
spot_imgspot_img

ವಿಟ್ಲ: ಭಾರ ಎತ್ತುವ ಸ್ಪರ್ಧೆ-2026 : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14 ರಿಂದ 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ-2026 ರಲ್ಲಿ ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

10 ನೇ ತರಗತಿಯ ವಂಧ್ಯಾ ಬಾಲಕಿಯರ 44 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 9 ನೇ ತರಗತಿಯ ಜಿತಿನ್ ಎಸ್. ಪೂಂಜಾ ಬಾಲಕರ 56 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿತಿನ್ ಎಸ್. ಪೂಂಜಾ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

9 ನೇ ತರಗತಿಯ ಮನಸ್ವಿ ಆರ್. ಕೆ. ಬಾಲಕಿಯರ 48 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಭಾನುಪ್ರಕಾಶ್ ಅವರು ತರಬೇತಿ ನೀಡಿದ್ದಾರೆ.

- Advertisement -

Related news

error: Content is protected !!