Tuesday, May 7, 2024
spot_imgspot_img
spot_imgspot_img

ವಿಟ್ಲ: ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಮುಡಿಗೇರಿಸಿಕೊಂಡ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ

- Advertisement -G L Acharya panikkar
- Advertisement -

ವಿಟ್ಲ : ವ್ಯವಸಾಯ ಸೇವಾ ಸಹಕಾರಿ ಸಂಘವು 2022-23ನೇ ಸಾಲಿನ ತನ್ನ ಸಾಧನೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಈ ಹಿಂದೆ ಅಪೆಕ್ಸ್ ಬ್ಯಾಂಕಿನಿಂದ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಹಲವು ಬಾರಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಈ ವ಼ರ್ಷ ಸತತ 2ನೇ ಬಾರಿ ಈ ಸಾಧನಾ ಪ್ರಶಸ್ತಿಯನ್ನು ಪಡದುಕೊಂಡಿದೆ. ವಿಟ್ಲ ಕಸಬಾ ಹಾಗೂ ವಿಟ್ಲ ಮುಡ್ನೂರು ಕಾರ್ಯವ್ಯಾಪ್ತಿ ಹೊಂದಿರುವ ಕೃಷಿ ಪತ್ತಿನ ಸಹಕಾರಿ ಸಂಘವಾದ ಇದು 2022-23ನೇ ಆರ್ಥಿಕ ವರ್ಷದಲ್ಲಿ ಸಂಘವು ರೂ. 186.78 ಕೋಟಿಗಳ ವ್ಯವಹಾರವನ್ನು ಮಾಡಿರುತ್ತದೆ. ರೂ೨೯.೧೧ ಕೋಟಿ ರುಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. ೨೯.೬೭ ಕೋಟಿ ಇರುತ್ತದೆ. ವಸೂಲಾತಿ ಪ್ರಮಾಣ ಶೇಕಡಾ ೯೬ ರಷ್ಟಿದ್ದು, ವರದಿ ವರ್ಷದಲ್ಲಿ ರೂ. ೮೪ ಲಕ್ಷ ಲಾಭಗಳಿಸಿದ್ದು, ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ ೪೯.೦೬ ಕೋಟಿಗಳಾಗಿರುತ್ತದೆ.

ಸಂಘ ಆಡಿಟ್ ವರ್ಗೀಕರಣದಲ್ಲಿ ಎ ತರಗತಿಯನ್ನು ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ, ದ.ಕ. ಜಿಲ್ಲಾ ಕೇಂದ್ರ ಸಹಾಕಾರಿ ಬ್ಯಾಂಕಿನ ಅಧ್ಯಕ್ಷ ಡಾ||. ಎಂ. ಎನ್ ರಾಜೇಂದ್ರ ಕುಮಾರ್ ಇವರು ದಿನಾಂಕ ೧೯-೦೮-೨೦೨೩ ರಂದು ಜರಗಿದ ಬ್ಯಾಂಕಿನ ಮಹಾಸಭೆಯಲ್ಲಿ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ವರ ಬಿ. ಇವರಿಗೆ ಶಾಲು ಹೊದಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಆಲಂಗಾರು ಸಹಕಾರಿ ಸಂಘಗಳ ಉಪನಿಬಂಧಕರು ರಮೇಶ್ ಎಚ್ ಎನ್, ಹಾಗೂ ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!