Sunday, May 5, 2024
spot_imgspot_img
spot_imgspot_img

ವಿಟ್ಲ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪತ್ತೆ!

- Advertisement -G L Acharya panikkar
- Advertisement -

ವಿಟ್ಲ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕೊಳ್ನಾಡು ಗ್ರಾಮದ ಪಾಣಾಜೆಕೋಡಿ ನಿವಾಸಿ ಅರುಣ್ ಡಿಸೋಜ ರವರ ಪತ್ನಿ ಶಿಲ್ಪಾ ಡಿಸೋಜ ನಾಪತ್ತೆಯಾಗಿದ್ದರು.

ಶಿಲ್ಪಾ ಡಿಸೋಜ ರವರು ಅರುಣ್ ಡಿಸೋಜ ರಿಗೆ ದೂರವಾಣಿ ಕರೆ ಮಾಡಿ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ ಎಂದು ತಿಳಿಸಿ ಕರೆ ಕಟ್ ಮಾಡಿದ್ದರು. ಬಳಿಕ ಅರುಣ್ ರವರು ಅನೇಕ ಬಾರಿ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸದೆ ಇದ್ದ ಕಾರಣ ಅವರು ಜ.29 ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ತನಿಖೆ ಆರಂಭಿಸುತ್ತಿದ್ದಂತೆ ಮಹಿಳೆ ಆಕೆಯ ಸಂಬಂಧಿಕರ ಮನೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದಿದೆ. ಆಕೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!