Friday, May 17, 2024
spot_imgspot_img
spot_imgspot_img

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವಿಶ್ವ ಜನಸಂಖ್ಯೆ ದಿನಾಚರಣೆ 2021 ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವಿಶ್ವ ಜನಸಂಖ್ಯೆ ದಿನಾಚರಣೆ 2021 ಕಾರ್ಯಕ್ರಮವು ವಿಟ್ಲ ಮಾದರಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯತ್ ನ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾಕ್ಟರ್ ವಿಶ್ವೇಶ್ವರ ಭಟ್ ವಹಿಸಿದ್ದರು. ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ ಉಪಾಧ್ಯಕ್ಷೆ ಉಷಾ, ಆಡಳಿತ ವೈದ್ಯಾಧಿಕಾರಿ ಡಾ| ವೇದಾವತಿ, ಲಯನ್ಸ್ ಕ್ಲಬ್ ನ ಅಧ್ಯಕ್ಷ ಸಂದೇಶ್ ಶೆಟ್ಟಿ, ಯುವಕ ಮಂಡಲದ ಸದಸ್ಯ ಸುದರ್ಶನ್ ಪಡಿಯಾರ್, ವಿಟ್ಲ ಮಾದರಿ ಶಾಲೆಯ ಮುಖ್ಯ ಶಿಕ್ಷಕಿ ದೇವಕಿ ಹಾಗೂ ಸಹಶಿಕ್ಷಕರು, ಶುಶ್ರೂಷಾಧಿಕಾರಿ ಸುಜಾತ, ಲಯನ್ಸ್ ಕ್ಲಬ್ ನ ಸತೀಶ್ ಆಳ್ವ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯರಿಗೆ ನಡೆಸಿದ ಒಂದು ನಿಮಿಷದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಶೋಭಾ, ದ್ವಿತೀಯ ಸ್ಥಾನವನ್ನು ಚಂದ್ರಿಕಾ ಪಡೆದುಕೊಂಡರು. ಭಾಷಣ ಸ್ಪರ್ಧೆ ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಿಶ್ಮಿತ, ದ್ವಿತೀಯ ಸ್ಥಾನವನ್ನು ನಿತಿನ್ ಕುಮಾರ್ ಪಡೆದುಕೊಂಡರು. ಭಾಷಣ ಸ್ಪರ್ಧೆ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಭಾರ್ಗವಿ, ದ್ವಿತೀಯ ಸ್ಥಾನವನ್ನು ಮಾನ್ವಿ ಗಿಟ್ಟಿಸಿಕೊಂಡರು. ಮಾಡೆಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಡೀನಾ ಶರಲ್ ಡಿಸೋಜಾ, ದ್ವಿತೀಯ ಸ್ಥಾನವನ್ನು ಕುಸುಮ ಪಡೆದುಕೊಂಡರು. ಕಾರ್ಯಕ್ರಮದ ನಿರೂಪಣೆಯನ್ನು ಡೀನಾ ಶರಲ್ ಡಿಸೋಜಾ, ಸ್ವಾಗತವನ್ನು ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮ, ಧನ್ಯವಾದವನ್ನು ಹಿರಿಯ ಆರೋಗ್ಯ ಸಹಾಯಕಿ ಇಂದಿರಾ ವಹಿಸಿದ್ದರು.

- Advertisement -

Related news

error: Content is protected !!