- Advertisement -




- Advertisement -
ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ವಿಟ್ಲ ಘಟಕದ 2023ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ವಿಟ್ಲ ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಆಗಮಿಸಿದ್ದರು. ವೇದಿಕೆಯಲ್ಲಿ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘ ನಿ. ಅಧ್ಯಕ್ಷ, ಎನ್. ಸಂಜೀವ ಪೂಜಾರಿ ವಿಟ್ಲ, ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಯಶವಂತ್.ಎನ್, ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ಅಧ್ಯಕ್ಷ ರಾಜೇಶ್ .ಬಿ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ರಾಣಿ ಅಬ್ಬಕ್ಕ ಅಕಾಡೆಮಿ ಮಂಗಳೂರು, ಟ್ರೈನಿಂಗ್ ಆಫೀಸರ್ ಕ್ಯಾಪ್ಟನ್ ದಾಸಪ್ಪ ಪೂಜಾರಿ ನೆಕ್ಕಿಲಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ಪ್ರವೀಣ್ ಒಂಕಲ್, ಯುವವಾಹಿನಿ (ರಿ.) ವಿಟ್ಲ ಘಟಕ ಕಾರ್ಯದರ್ಶಿ, ಹರೀಶ.ಕೆ ಉಪಸ್ಥಿತರಿದ್ದರು.

- Advertisement -