Saturday, July 25, 2026
spot_imgspot_img
spot_imgspot_img

ವಿಟ್ಲ: ಕಂಬಳಬೆಟ್ಟು ಪರಿಸರದಲ್ಲಿ ಮತ್ತೆ ಮೊಳಗಿದ ಸ್ಫೋಟಕ ಶಬ್ದ..! ಆತಂಕಗೊಂಡ ಜನತೆ

- Advertisement -
- Advertisement -

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಮತ್ತೆ ಸ್ಫೋಟದ ಶಬ್ದ ಗೋಚರಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸು ಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ ಘಟನೆಯು ಎಲ್ಲರನ್ನು ಬೆಚ್ಚಿ ಬೀಳಿಸಿತ್ತು.

ಇದೀಗ ಮತ್ತೆ ಅದೇ ಪರಿಸರದಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದು, ಜನರು ಭಯ ಭೀತರಾಗಿದ್ದಾರೆ. ಸ್ಫೋಟಗೊಂಡು ವಾತಾವರಣದ ತುಂಬಾ ಬಾನೆತ್ತರದಲ್ಲಿ ಹೊಗೆ ಆವರಿಸಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೇನು ತಿಳಿಯಬೇಕಿದೆ.

- Advertisement -

Related news

error: Content is protected !!