(ಫೆ.15) ಶನಿವಾರದ ಕಾರ್ಯಕ್ರಮ





ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಯಕ್ಷಿ ಶ್ರೀ ಪದ್ಮಾವತಿ ಅಮ್ಮನವರ ಮತ್ತು ಯಕ್ಷಿ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವವು 13-02-2025ನೇ ಗುರುವಾರದಿಂದ 17-02-2025ನೇ ಸೋಮವಾರದವರೆಗೆ ನಡೆಯಲಿದೆ.

ದಿನಾಂಕ:15-02-2025ನೇ ಶನಿವಾರ ಬೆಳಿಗ್ಗೆ 8:00ರಿಂದ ನಿತ್ಯವಿಧಿ ಬಳಿಕ 09:25ರ ಮೀನ ಲಗ್ನದಲ್ಲಿ ಜಿನಬಾಲಕನ ಜನ್ಮಕಲ್ಯಾಣ ಅಷ್ಟದಿಕ್ಷು ಧಾಮ ಸಂಪ್ರೋಕ್ಷಣೆ, ಚತುರ್ದಿಕ್ಷು ಹೋಮ, ಗ್ರಹಯಜ್ಞ ವಿಧಾನ, ಜಲಾಗ್ನಿ ಹೋಮ ಪಾಂಡುಕಾಶಿಲೋಪರಿ ೧೦೮ ಕಲಕಗಳಿಂದ ಜಿನಬಾಲಕನ ಜನ್ಮಾಭಿಷೇಕ, ನಾಮಕರಣ, ಬಾಲಲೀಲಾ ಮಹೋತ್ಸವ ನಡೆದು ಅಪರಾಹ್ನ 02:00ರಿಂದ ರಾಜ್ಯಾಭಿಷೇಕ ಬಳಿಕ ಸಂಜೆ 5:25ರ ಕರ್ಕಾಟಕ ಲಗ್ನದಲ್ಲಿ ವೈರಾಗ್ಯಪೂರ್ವಕ ದೀಕ್ಷಾ ವಿಧಿ, ಪರಿನಿಷ್ಟಮಣ ಕಲ್ಯಾಣ. ೧೪ ಕಲಕ ಅಭಿಷೇಕ, ಮಹಾಪೂಜೆ ನಡೆಯಲಿದೆ.

ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ ಮೂಡುಬಿದಿರೆ, ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಸಿಂಹನಗದ್ದೆ ಬಸ್ತಿ ಮಠ, ನರಸಿಂಹರಾಜಪುರ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀಮತಿ ಅನಿತಾ ಡಿ. ಸುರೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾಋ ರೈ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೇರವೆರಿಸಲಿದ್ದಾರೆ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್, ದ.ಕ. ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮಂಗಳೂರು ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.ರಾತ್ರಿ 7:00ರಿಂದ ಉಜಿರೆ ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಎಸ್.ಡಿ.ಎಂ. ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.








