Saturday, June 28, 2025
spot_imgspot_img
spot_imgspot_img

ವಿಟ್ಲ: ಬಾಕ್ಸೈಟ್ ಮಣ್ಣು ಸಾಗಾಟದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಇನ್ನೊರ್ವ ಗಂಭೀರ

- Advertisement -
- Advertisement -

ವಿಟ್ಲ: ಬಾಕ್ಸೈಟ್‌ ಲಾರಿಗೆ ಬೈಕ್‌ ಡಿಕ್ಕಿಹೊಡೆದು ಬೈಕ್‌ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲ ಒಕ್ಕೆತ್ತೂರು ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ನಿಲ್ಲಿಸಿದ್ದಾನೆ. ಪರಿಣಾಮ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಒಕ್ಕೆತ್ತೂರು ನಿವಾಸಿ ಇರ್ಫಾನ್ (18) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಗಾಯಾಳು ಫಾರೀಸ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕ ಬೇಜವಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!