- Advertisement -
- Advertisement -
ವಿಟ್ಲ ಠಾಣೆಗೆ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಭೇಟಿ..! ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯ




ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಡೆದ ತಕ್ಷಣವೇ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಉರಿಮಜಲು ನಿವಾಸಿ ಗಾಯಾಳು ಗಣೇಶ್ರವರಿಗೆ ಸಾಂತ್ವನ ಹೇಳಿದ್ದಾರೆ. ಮತ್ತು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹಲ್ಲೆಗೈದ ಆರೋಪಿ ಕೋಲ್ಪೆ ನಿವಾಸಿ ಸುಲೈಮಾನ್ ರವರ ಪುತ್ರ ಇರ್ಷಾದ್ ಎಂಬಾತನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -








