



ವಿಟ್ಲ: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಜನ ಜಾಗೃತಿ ರಥವು ವಿಟ್ಲ ಜೈನ ಬದಿಯಿಂದ ವಿಟ್ಲ ಬಸವನಗುಡಿ ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತನಕ ಸಂಚರಿಸಿ ಜಾಗೃತಿ ಮೂಡಿಸಿತು. ಜಾಗೃತಿ ರಥಯಾತ್ರೆಯಲ್ಲಿ ವಿಠಲ ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ಹಾಗೂ ವಿಠಲ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.



ಬಳಿಕ ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಶ್ರೀಧರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಅಧ್ಯಕ್ಷ ಲ.ಸಂಜೀವ ಪೂಜಾರಿ, ರೋಟರಿ ಕ್ಲಬ್ ವಿಟ್ಲ ಅಧ್ಯಕ್ಷರು ಜೈ ಕಿಸಾನ್, ಪರಿವರ್ತನಾ ಟ್ರಸ್ಟ್ ಬೆಂಗಳೂರು ರಥಯಾತ್ರೆ ಸಂಯೋಜಕರು ಸಂದೇಶ್, ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ ಬೆಂಞಣ್ತಿಮಾರ್, ವಿಠಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಅಣ್ಣಪ್ಪ ಶಾಸ್ತಾನ, ಜೆಸಿಐ ವಲಯಾಧ್ಯಕ್ಷರು ಸಂತೋಷ್ ಶೆಟ್ಟಿ ಪೆಲತ್ತಡ್ಕ, ಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಕೃಷ್ಣ ಎರುಂಬು, ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಸಂಯೋಜಕರು ಕಾರ್ಯಕ್ರಮದಲ್ಲಿ ನರಸಿಂಹ ಮಾಣಿ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರು ಅರುಣ್ ವಿಟ್ಲ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ರವೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು., ವಿದ್ಯಾರ್ಥಿನಿ ಹೃದ್ವಿ ಪ್ರತಿಜ್ಞಾ ಪತ್ರ ವಾಚಿಸಿದರು. ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಿಸಿದರು.








