- Advertisement -
- Advertisement -


ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 152 ನೇ ಗಾಂಧಿ ಜಯಂತಿಯನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ ರೈಯವರು ದಿನದ ಪ್ರಾಮುಖ್ಯತೆಯ ಕುರಿತು ಮಾತನಾಡುತ್ತಾ, “ಜಗತ್ತು ಬದಲಾಗಬೇಕು ಎನ್ನುವವರು ಮೊದಲು ತಮ್ಮಿಂದಲೇ ಬದಲಾವಣೆಯಾಗ ಬೇಕು ಎಂಬುದನ್ನು ಅರಿತುಕೊಳ್ಳಬೇಕು” ಎಂಬಂತೆ ಬದಲಾದ ಪರಿಸ್ಥಿತಿಗೆ ಒಗ್ಗಿಕೊಂಡು ಬದುಕುವುದು ಅನಿವಾರ್ಯವಾಗಿದೆ. ಪ್ರಸ್ತುತ ಸನ್ನಿವೇಶದ ಪರಿಸ್ಥಿತಿಗೆ ಸಾಂಕೇತಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಒದಗಿದೆ ಎಂದು ತಿಳಿಸಿದರು.

ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎ ಉಪಸ್ಥಿತರಿದ್ದರು. ಹಾಗೆಯೇ ಎಲ್ಲಾ ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿ ವರ್ಗದವರು ಕೋವಿಡ್ ನಿಯಮದನ್ವಯ ಸಾಮಾಜಿಕ ಅಂತರ ಕಾಯ್ದಕೊಂಡು ಪುಷ್ಪ ವಂದನೆ ಸಲ್ಲಿಸಿದರು.



- Advertisement -








