Monday, July 20, 2026
spot_imgspot_img
spot_imgspot_img

ವಿಟ್ಲ: ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಾರ್ಷಿಕ ವಿಶೇಷ ಶಿಬಿರ 2025-26 “ನಶಾ ಮುಕ್ತ ಭಾರತ ಅಭಿಯಾನ”

- Advertisement -
- Advertisement -

ವಿಟ್ಲ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ 22 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ 2025-26 “ನಶಾ ಮುಕ್ತ ಭಾರತ ಅಭಿಯಾನ” ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ನೀರ್ಕಜೆ ಇಲ್ಲ ಪ್ರಾರಂಭವಾಯಿತು

ಶಿಬಿರವನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಸಾರಡ್ಕ ಉದ್ಘಾಟಿಸಿದರು. ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಕೇಪು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಹೇಮಾವತಿ, ವಿಟ್ಠಲ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಉಪನ್ಯಾಸಕರು, ಸದಸ್ಯ ನಿತ್ಯಾನಂದ ನಾಯಕ್, ಶಾಲಾ ಮುಖ್ಯ ಶಿಕ್ಷಕ ಬಾಬು ನಾಯ್ಕ, ಎಸ್‌ ಡಿ ಎಂ ಸಿ ಅಧ್ಯಕ್ಷ ಜತ್ತಪ್ಪ ಗೌಡ ಇವರು ಭಾಗವಹಿಸಿದ್ದರು. ಶಿಬಿರಾಧಿಕಾರಿ ಅಣ್ಣಪ್ಪ ಸಾಸ್ತಾನ ಸ್ವಾಗತಿಸಿ, ಪ್ರಕಾಶ್ ನಾಯಕ್ ವಂದಿಸಿ ನಿರೂಪಿಸಿದರು.

- Advertisement -

Related news

error: Content is protected !!