- Advertisement -
- Advertisement -




ವಿಟ್ಲ: ಶ್ರೀ ದೇವತಾ ಸಮಿತಿ ಇದರ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಪ್ರಾರಂಭವಾಯಿತು.

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ದೇವತಾ ಸಮಿತಿ ಗೌರವ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಧ್ವಜಾರೋಹಣ ಮಾಡಿ ಪ್ರಸ್ತಾವಿಸಿದರು. ಅಧ್ಯಕ್ಷ ನರ್ಸಪ್ಪ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಗ್ರಾಮಾಂತರ ಜಿಲ್ಲಾ ಭೌಧಿಕ್ ಪ್ರಮುಖ್ ವಿನೋದ್ ಅಡ್ಕಸ್ಥಳ ಧಾರ್ಮಿಕ ಭಾಷಣ ಮಾಡಿದರು. ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ದೇವತಾ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಪೈ ಸ್ವಾಗತಿಸಿದರು. ತುಳಸಿ ದಾಸ್ ಶೆಣೈ ವಂದೇ ಮಾತರಂ ಹಾಡಿದರು. ಸುದರ್ಶನ ಪಡಿಯಾರ್ ವಂದಿಸಿದರು. ವಿಟ್ಲ ಮಂಗೇಶ್ ಭಟ್ ನಿರೂಪಿಸಿದರು.

- Advertisement -








