Saturday, July 25, 2026
spot_imgspot_img
spot_imgspot_img

ವಿಟ್ಲ : ಬಾಕ್ಸೈಟ್ ಸಾಗಾಟ ಮಾಡುತ್ತಿದ್ದ ಲಾರಿಗಳಿಗೆ ಶಾಲಾ ಅವಧಿಯಲ್ಲಿ ಸಾಗಾಣಿಕೆ ಮಾಡದಂತೆ ಎಚ್ಚರಿಕೆ..!

- Advertisement -
- Advertisement -

ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಸ್ಥಳೀಯರಿಂದ ಪ್ರತಿಭಟನೆ

ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೇಕಲ್ಲು ಎಂಬಲ್ಲಿ ದಾಖಲಾತಿ ಮತ್ತು ಪರವಾನಿಗೆಯಲ್ಲಿ ( MDP No.252617431T003662), (Lease No.DSKN5413) ಬಾಕ್ಸೈಟ್ ಮಣ್ಣು ಲಾರಿಗಳ ಮುಖಾಂತರ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದು, ಬಾಕ್ಸೈಟ್ ಸಾಗಾಟ ಮಾಡುತ್ತಿದ್ದ ಬಗ್ಗೆ ಶಾಲಾ ಮಕ್ಕಳಿಗೆ ಶಾಲೆಗೆ ಹೋಗಿ ಬರುವಾಗ ತೊಂದರೆಯಾಗುತ್ತಿರುವ ಬಗ್ಗೆ ಡಿ.30 ರಂದು ಸ್ಥಳೀಯರು ಪ್ರತಿಭಟನೆ ಮಾಡಿದ್ದರು.

ಈ ಹಿನ್ನೆಲೆ ಶಾಲಾ ಮಕ್ಕಳು ಬೆಳಗ್ಗೆ ಶಾಲೆಗೆ ಹೋಗುವ ಸಮಯ ಮತ್ತು ಶಾಲೆ ಬಿಡುವ ಸಮಯ ಲಾರಿಗಳನ್ನು ಸಂಚಾರ ಮಾಡದಂತೆ ಬಾಕ್ಸೈಟ್ ಸರಕು ಸಾಗಾಣಿಕೆ ಮಾಡುವವರಿಗೆ ಪೊಲೀಸ್ ಇಲಾಖೆಯಿಂದ ತಿಳುವಳಿಕೆ ನೀಡಲಾಗಿದೆ.

- Advertisement -

Related news

error: Content is protected !!