Monday, June 8, 2026
spot_imgspot_img
spot_imgspot_img

ವಿಟ್ಲ: ಎರಡು ಕಳ್ಳತನ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕೂಳೂರು ಗ್ರಾಮ ಮಂಜೇಶ್ವರ ತಾಲೂಕು ” ಅಶ್ರಫ್ @ ಚಿಲ್ಲಿ ಅಶ್ರಫ್ (32) ಎಂದು ಗುರುತಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 165/2015 ಕಲಂ: 397 IPC ( 07- 08-2015 ರಂದು ವಿಟ್ಲ ಪೇಟೆಯಲ್ಲಿ ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಪುಡಿಯ ಎರಚಿ ದರೋಡೆ ಪ್ರಕರಣ ದಾಖಲಾಗಿದ್ದು ಈ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದು. ಈ ಬಗ್ಗೆ LPC – 03/2025 ರಂತೆ ವಾರೆಂಟ್ ಜಾರಿಯಾಗಿರುತ್ತದೆ).

ವಿಟ್ಲ ಠಾಣಾ ಆ.ಕ್ರ ನಂ- 16/2016 ಕಲಂ. 457.380 IPC. ( 23-01-2016 ರಂದು ಕೊಲ್ನಾಡು ಗ್ರಾಮದ ವೈನ್ ಶಾಪ್‌‌‌‌‌‌ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು. ಈ ಪ್ರಕರಣದಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದ. ಈ ಬಗ್ಗೆ ನ್ಯಾಯಾಲಯದಿಂದ 82 & 83 ವಾರಂಟ್ ಜಾರಿಯಾಗಿರುವುದಾಗಿದೆ.

ರಡು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ ಅಶ್ರಫ್ ಎಂಬಾತನನ್ನು ದಿನಾಂಕ 21-09-2025 ಕೂಳೂರು ಮಂಜೇಶ್ವರ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!