Monday, July 27, 2026
spot_imgspot_img
spot_imgspot_img

ವಿಟ್ಲ: ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬೀಟ್‌ ಸಿಬ್ಬಂದಿಯ ವರದಿ ಮತ್ತು ಮೇಲಾಧಿಕಾರಿಯ ಸಹಿ ಫೋರ್ಜರಿ; ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯ ಬಂಧನ

- Advertisement -
- Advertisement -

ವಿಟ್ಲ: ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬೀಟ್‌ ಸಿಬ್ಬಂದಿಯ ವರದಿ ಮತ್ತು ಮೇಲಾಧಿಕಾರಿಯ ಸಹಿ ಫೋರ್ಜರಿ ಮಾಡಿದ ಆರೋಪದ ಮೇಲೆ ವಿಟ್ಲ ಪೋಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತರನ್ನು ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಎಂದು ಗುರುತಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ SHAKTI DAS ಎಂಬ ಹೆಸರಿನ ವ್ಯಕ್ತಿಯು‌ 2025ನೇ ಫೆಬ್ರವರಿ ತಿಂಗಳಲ್ಲಿ ಪಾಸ್ ಪೊರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದು ಅರ್ಜಿಯ ಬಗ್ಗೆ ಪೊಲೀಸ್ ವೆರಿಫಿಕೇಶನ್ ಮಾಡುವ ವೇಳೆ ಅರ್ಜಿದಾರರ ವಿಳಾಸವು ದಾಖಲಾತಿಗಳಲ್ಲಿನ ವಿಳಾಸಕ್ಕೆ ತಾಳೆಯಾಗದಿರುವುದರಿಂದ ನಾ-ಶಿಫಾರಸ್ಸು ಮಾಡಲಾಗಿರುತ್ತದೆ. ವ್ಯಕ್ತಿಯು 2025ನೇ ಇಸವಿಯ ಜೂನ್‌ ತಿಂಗಳಲ್ಲಿ ಮರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಮರು ಅರ್ಜಿಯನ್ನು ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಆರೋಪಿ ಪ್ರದೀಪ್ ಎಂಬವರು ಅರ್ಜಿದಾರರ ವಿಳಾಸವಿರುವ ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಅರಿವಿಗೆ ಬಾರದಂತೆ ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಹೆಸರಿನಲ್ಲಿ ವರದಿ ತಯಾರಿಸಿ, ಬೀಟ್ ಸಿಬ್ಬಂದಿಯ ಸಹಿಯನ್ನು ಫೋರ್ಜರಿ ಮಾಡಿ, ಮೇಲಾಧಿಕಾರಿಯವರಿಂದ ಶಿಫಾರಸ್ಸು ಮಾಡಿಸಿ ಕಳುಹಿಸಿ ಕೊಟ್ಟಿರುತ್ತಾರೆ ಹಾಗೂ ಪರಿಶೀಲನಾ ದಾಖಲೆಗಳನ್ನು ಯಾರಿಗೂ ಗೊತ್ತಾಗಬಾರದೆಂದು ನಾಶಪಡಸಿರುತ್ತಾರೆ.

ಡಿ.19ರಂದು ದಾಖಲೆಯನ್ನು ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, ಕೇಂದ್ರ ಸರಕಾರದಿಂದ ನೀಡಲ್ಪಡುವ ಅತೀ ಪ್ರಮುಖ ಗುರುತಿನ ಚೀಟಿ(Passport) ಅನ್ನು, ಅಪರಾಧಿಕ ನಂಬಿಕೆ ದ್ರೋಹ ಬಗೆದು SHAKTI DAS ಎಂಬವರಿಗೆ ಪಾಸ್‌ಪೋರ್ಟ್‌ ಹಾಗೂ ಪೊಲೀಸ್‌ ಕ್ಲೀಯರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಮಾಡಿ ಕಡತವನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಪಾಸ್‌ಪೋರ್ಟ್‌ ಪಡೆದ SHAKTI DAS ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 193/2025, ಕಲಂ: 336, 337, 316(5), 238 BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪ್ರದೀಪ್‌ರವರನ್ನು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Related news

error: Content is protected !!