Monday, May 6, 2024
spot_imgspot_img
spot_imgspot_img

ವಿಠಲ ಪದವಿಪೂರ್ವ ಕಾಲೇಜಿನಲ್ಲಿ – ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla

ವಿಟ್ಲ : ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಪ್ರಸ್ತುತ ಸಮಾಜದ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಯೋಗ ಚಿಕಿತ್ಸಕಿ ಕು। ಅಹಲ್ಯಾ ಪಿ.ಜಿ ಅವರು ಹೇಳಿದರು. ಇವರು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿ ಮಾತನಾಡಿದರು.

ವಿಠಲ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಶ್ರೀ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಸದಸ್ಯರಾದ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ರವಿಪ್ರಕಾಶ್, ಸದಾಶಿವ ಬನ ಹಾಗೂ ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ವಿಶ್ವಕುಮಾರಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ರಕ್ಷಿತಾ ರೈ ವಂದಿಸಿ , ಉಪನ್ಯಾಸಕ ಮಾಧವ್ ಕಾರ್ಯಕ್ರಮ ನಿರೂಪಣೆಗೈದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಸಹಕರಿಸಿದರು.

- Advertisement -

Related news

error: Content is protected !!