- Advertisement -
- Advertisement -



ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ವಿಟ್ಲ, ವಿಟ್ಠಲ ಪದವಿಪೂರ್ವ ಕಾಲೇಜು ಹಾಗೂ ವಿಟ್ಠಲ ಪ್ರೌಢಶಾಲೆ ಇದರ ವಾರ್ಷಿಕ ಕ್ರೀಡಾಕೂಟವನ್ನು ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಉದ್ಘಾಟಿಸಿದರು. ನಿವೃತ್ತ ವೈಸ್ ಪ್ರಾಂಶುಪಾಲ ಹೆಚ್ ಸುಬ್ರಹ್ಮಣ್ಯ ಭಟ್ ಧ್ವಜಾರೋಹಣ ಮಾಡಿದರು.

ವಿಟ್ಠಲ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಅಲ್ಫಾನ್ಸೊ ಸಿಲ್ವೆಸ್ಟರ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಸದಸ್ಯರುಗಳಾದ ನಿತ್ಯಾನಂದ ನಾಯಕ್, ರವೀಶ್ ವಿಟ್ಲ ಮತ್ತು ಸದಾಶಿವ ಬನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತ್ರಿಷಾ ಪ್ರತಿಜ್ಞಾ ವಿಧಿ ನೆರವೇರಿಸಿದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ವೈಸ್ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಸಹಕರಿಸಿದರು.
- Advertisement -