


ವಿಟ್ಲ: ಬಸವನ ಗುಡಿಯಲ್ಲಿರುವ ವಿಠ್ಠಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕ ಕ್ರೀಡೋತ್ಸವ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢಶಾಲೆಯ ದೈಹಿಕ ಶಿಕ್ಷಕ ಅಶೋಕ ಭಟ್ ಉದ್ಘಾಟಿಸಿ “ಕ್ರೀಡೆಯಲ್ಲಿ, ಯಶಸ್ಸಿಗೆ ಯಾವುದೇ ಶಾರ್ಟ್‌ಕಟ್‌ಗಳಿಲ್ಲ. ಏಕೈಕ ಮಾರ್ಗವೆಂದರೆ ಕಠಿಣ ಪರಿಶ್ರಮ, ನಿರಂತರತೆ ಮತ್ತು ನಮ್ಮಲ್ಲಿನ ಅಚಲವಾದ ನಂಬಿಕೆ. ಹಾಗೆಂದು ಸೋಲು ಗೆಲುವಿನ ಸೋಪಾನ ” ಎನ್ನುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಕ್ರೀಡೋತ್ಸವದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಶ್ರೀಧರ ಶೆಟ್ಟಿ ಮತನಾಡಿ ಮಕ್ಕಳ ಕ್ರೀಡಾ ಸ್ಪೂರ್ತಿ ಅನಾವರಣಗೊಳ್ಳಲಿ ಎಂದು ಶುಭಂಸನೆಗೈದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮೋಹನ ಎ, ನಿರ್ದೇಶಕ ಹಸನ್ ವಿಟ್ಲ, ಸಂತೋಷ್ ಶೆಟ್ಟಿ, ಆಡಳಿತಾಧಿಕಾರಿ ರಾಧಾಕೃಷ್ಣ ಎ, ಪ್ರಾಂಶುಪಾಲ ಜಯರಾಮ ರೈ, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಶಾಲಾ ದೈಹಿಕ ಶಿಕ್ಷಕರಾದ ಭಾನುಪ್ರಕಾಶ್ ಹಾಗೂ ಶಶಿಕಲಾ ಕಾರ್ಯಕ್ರಮ ಸಂಯೋಜಿಸಿದರು. ಸಹಶಿಕ್ಷಕಿ ಲಾವಣ್ಯ ನಿರೂಪಿಸಿದರು. ಆಕರ್ಷಕ ಪಥಸಂಚಲನ ಎಲ್ಲರನ್ನು ಆಕರ್ಷಿಸಿತು.