Monday, July 20, 2026
spot_imgspot_img
spot_imgspot_img

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ (ರಿ.) ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ಮತ್ತು ಐಟಿಐ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

- Advertisement -
- Advertisement -

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ಮತ್ತು ಐಟಿಐ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡೋತ್ಸವವನ್ನು ರಾಷ್ಟ್ರೀಯ ಈಜು ಪಟು ಶ್ರೀಲಕ್ಷ್ಮಿ ಉದ್ಘಾಟಿಸಿದರು.

ಮುಖ್ಯ ಅಥಿತಿಯಾಗಿ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ವಿಲ್ಫ್ರೆಡ್ ವೇಗಸ್ ಇವರು ಭಾಗವಹಿಸಿದ್ದರು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ನಿತ್ಯಾನಂದ ನಾಯಕ್, ರವಿಪ್ರಕಾಶ್ ಮತ್ತು ಸದಾಶಿವ ಬನ, ನಿವೃತ್ತ ಉಪಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಸುದರ್ಶನ ಪಡಿಯಾರ್, ಐಟಿಐ ಪ್ರಿನ್ಸಿಪಾಲ್ ರಮೇಶ್ ರೈ ವೇದಿಕೆಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಲಕ್ಷ್ಮಿ ಮತ್ತು ವಿಲ್ಫ್ರೆಡ್ ಇವರನ್ನು ಸನ್ಮಾನಿಸಲಾಯಿತು. ತಾಲೂಕು ಮಟ್ಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ವಿಟ್ಠಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಸ್ತಾಂತರ ಮಾಡಲಾಯಿತು. ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಉಪಪ್ರಾಂಶುಪಾಲ ಕಿರಣ್ ಕುಮಾರ್ ವಂದಿಸಿದರು. ಶ್ರೀಹರಿ ನಿರೂಪಿಸಿದರು.

- Advertisement -

Related news

error: Content is protected !!