Tuesday, July 21, 2026
spot_imgspot_img
spot_imgspot_img

ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದಲ್ಲಿ, ಸುಪ್ರಜಿತ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ಗಳೊಂದಿಗೆ ಉಚಿತ ಶಿಕ್ಷಣವನ್ನು ದಾನಿಗಳು ಸಹಾಯದಿಂದ ನೀಡಲಾಗುತ್ತದೆ. ಈ ಉಚಿತ ಶಿಕ್ಷಣಕ್ಕೆ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ಅಧ್ಯಕ್ಷ ಅಜಿತ್ ಕುಮಾರ್ ರೈ ಯವರು ಅತೀ ಹೆಚ್ಚು ವೈಯಕ್ತಿಕ ದೇಣಿಗೆ ನೀಡಿರುತ್ತಾರೆ. ಆ ಕಾರಣಕ್ಕಾಗಿ ಅಜಿತ್ ಕುಮಾರ್ ರೈ ಯವರನ್ನು ಸುಪ್ರಜಿತ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮದಲ್ಲಿ, ಉಚಿತ ಶಿಕ್ಷಣ ದ ಅಧ್ಯಕ್ಷ ಬಾಬು ಕೊಪ್ಪಳ ಗೌರವಿಸಿದರು.

ಈ ಸಂದರ್ಭದಲ್ಲಿ ವಿಠ್ಠಲ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಉಪಾಧ್ಯಕ್ಷ ಸುಬ್ರಾಯ ಪೈ, ಸಂಚಾಲಕ ರಾಧಾಕೃಷ್ಣ ನಾಯಕ್, ಸದಸ್ಯ ನಿತ್ಯಾನಂದ ನಾಯಕ್ ಐಟಿಐ ಸಂಚಾಲಕ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್ ಉಪಸ್ಥಿತರಿದ್ದರು.

- Advertisement -

Related news

error: Content is protected !!