Tuesday, May 7, 2024
spot_imgspot_img
spot_imgspot_img

ವಿಟ್ಲ: 1722ನೇ ಮದ್ಯವರ್ಜನ ಶಿಬಿರ ಕಾರ್ಯಗಾರ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಬಂಟ್ವಾಳ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ವಿಟ್ಲ, ಪಟ್ಟಣ ಪಂಚಾಯತ್ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ, ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ, ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ರೋಟರಿ ಕ್ಲಬ್ ಬಂಟ್ವಾಳ, ನವಜೀವನ ಸಮಿತಿ ವಿಟ್ಲ, ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಟ್ಲ ಶಾಂತಿನಗರದ ಅಕ್ಷಯ ಸಮುದಾಯ ಭವನದಲ್ಲಿ 1722ನೇ ಮದ್ಯವರ್ಜನ ಶಿಬಿರ ಕಾರ್ಯಗಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಟ್ಲ ಜನ ಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಮದ್ಯವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಹೇಳಿದರು. ಯೋಜನೆಯ ದಕ್ಷಿಣ ಕನ್ನಡ ಎರಡರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ಮಧ್ಯವರ್ಜನ ಶಿಬಿರದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ, ಡಾಕ್ಟರ್ ಮಂದಾರ ಜೈನ್, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಕುಸುಮಾವತಿ, ರಾಧಾಕೃಷ್ಣ ಚಲ್ಲಡ್ಕ, ರೋಟರಿ ಕ್ಲಬ್ ಬಂಟ್ವಾಳ ಇದರ ಮಾಜಿ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಮುಡಿಪು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಆಳ್ವ, ಪೆರ್ನೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರೋಹಿತಾಕ್ಷ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ವಿಟ್ಲ ವಲಯ ಅಧ್ಯಕ್ಷ, ಪ್ರಮೀಳಾ, ಅಳಿಕೆ ವಲಯ ಅಧ್ಯಕ್ಷ ರಾಜೇಂದ್ರ , ಕೇಪು ವಲಯ ಅಧ್ಯಕ್ಷೆ ಪುಷ್ಪಾಕರ್ ರೈ ಮೊದಲದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!