Friday, July 24, 2026
spot_imgspot_img
spot_imgspot_img

ವಿಟ್ಲ: ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ: ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಯುವಕನ ಬಂಧನ

- Advertisement -
- Advertisement -

ವಿಟ್ಲ: ನೀಟ್ ಪರೀಕ್ಷೆ ವಿರುದ್ಧ ನಡೆಯುತ್ತಿದ್ದ ಹೋರಾಟವನ್ನು ಧಾರ್ಮಿಕ ವಿಚಾರಗಳಿಗೆ ಥಳುಕು ಹಾಕಿ, ಜಾಲತಾಣಗಳಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೇಪು ನಿವಾಸಿ ಭರತ್ (36) ಎಂದು ಗುರುತಿಸಲಾಗಿದೆ.

ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗ್ರೂಪ್‌ನ ಸದಸ್ಯರಾಗಿದ್ದು, ಜುಲೈ 23ರಂದು ಸದ್ರಿ ಗ್ರೂಪ್‌ನಲ್ಲಿ ಹರಿಫೋಡಲಾಗಿದ್ದ ಸ್ಕಿನ್‌ಶಾಟ್ ಒಂದನ್ನು ವೀಕ್ಷಿಸಿದ್ದರು. ಅದರಲ್ಲಿ ಎರಡು ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಕೋಮು ಪ್ರಚೋದನಾತ್ಮಕ ಬರಹಗಳಿದ್ದವು. ಈ ಕುರಿತು ಪರಿಶೀಲನೆ ನಡೆಸಿದಾಗ, ಆರೋಪಿ ಭರತ್ ಎಂಬಾತ ಈ ಅವಹೇಳನಕಾರಿ ಪೋಸ್ಟ್ ಅನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿರುವುದು ಬೆಳಕಿಗೆ ಬಂದಿತ್ತು.

ಈ ಕುರಿತು ದೊರೆತ ದೂರಿನನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 160/2026, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 197(1)(a), 197(1)(c) ಹಾಗೂ 353(2) ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

- Advertisement -

Related news

error: Content is protected !!