Saturday, April 27, 2024
spot_imgspot_img
spot_imgspot_img

ವಿಟ್ಲ: 4ವರ್ಷದ ಬಾಲಕಿ ಹೃದಯ ಸಂಬಂಧಿ ಖಾಯಿಲೆಯಿಂದ ಮೃತ್ಯು..!

- Advertisement -G L Acharya panikkar
- Advertisement -

ವಿಟ್ಲ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಇಂದು ಮುಂಜಾನೆ ಮೃತಪಟ್ಟಿದ್ದಾಳೆ.

ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ.

ಪುತ್ತೂರಿನ ಮುರದಲ್ಲಿರುವ ಖಾಸಗಿ ಸ್ಕೂಲ್ ನ ಎಲ್.ಕೆ.ಜಿ.ಯಲ್ಲಿ ಕಲಿಯುತ್ತಿದ್ದ ಈಕೆ ಅನಾರೋಗ್ಯದ ಕಾರಣ ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

- Advertisement -

Related news

error: Content is protected !!