Sunday, June 29, 2025
spot_imgspot_img
spot_imgspot_img

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ ಸೇವಾ ಕಾರ್ಯಕ್ರಮಗಳು

- Advertisement -
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲದಲ್ಲಿ ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ ಸೇವಾ ಕೈಂಕರ್ಯಗಳು ಕಾರ್ಯಕ್ರಮವು ಜು.16ರಂದು ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ 8ಗಂಟೆಗೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜಾ ಆರಂಭ, ನಾಗದರ್ಶನ, ಶ್ರೀ ಸ್ವಾಮಿಗೆ ಅಭಿಷೇಕ, ಅಲಂಕಾರ ಪೂಜೆ ಮಹಾಪೂಜೆ, ಪ್ರಸಾದ ವಿತರಣೆ ನಡೆದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!