




ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.


ಕುಶಾಲಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ರೇಣುಕಾ ಪ್ರಸಾದ್ ಕೆ ವಿ ಕುರುಂಜಿ ದಂಪತಿಗಳು ಮತ್ತು ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ದತ್ತಿ ನಿಧಿ ನೀಡಿದ ದಾನಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮುದಾಯದ ಶಾಶ್ವತ ನಿಧಿಗೆ ದೇಣಿಗೆ ಕೊಟ್ಟವರನ್ನು ಸನ್ಮಾನಿಸಲಾಯಿತು. ನಿರ್ದೇಶಕರಾಗಿ ನೇಮಕಗೊಂಡ ಸಮುದಾಯದ ಬಂಧುಗಳನ್ನು ಗುರುತಿಸಿ ಗೌರವಿಸಲಾಯಿತು ಹಾಗೂ ಆಪತ್ಕಾಲ ನಿಧಿಗೆ ದೇಣಿಗೆ ನೀಡಿದವರನ್ನು ಗೌರವಿಸಲಾಯಿತು.


ಮುಖ್ಯ ಅತಿಥಿಗಳು ಗೌಡ ಸಮುದಾಯದ ಹಿನ್ನೆಲೆಯ ಬಗ್ಗೆ ಯುವ ಜನಾಂಗಕ್ಕೆ ತಿಳಿ ಹೇಳಿದರು. ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಡಾ. ರೇಣುಕಾ ಪ್ರಸಾದ್ ರಾಜ್ಯ ಒಕ್ಕಲಿಗ ಸಂಘದಿಂದ ಪಡೆಯಬಹುದಾದ ಸವಲತ್ತುಗಳ ಬಗ್ಗೆ ತಿಳಿಸಿದರು.
ಕುಮಾರಿ ಜನ್ಯ ಪ್ರಸಾದ್ ಕೋಂಗಲಾಯಿ ಪ್ರಾರ್ಥನೆಗೈದರು. ಸಂಘದ ಗೌರವಾಧ್ಯಕ್ಷ ಗಿರಿಯಪ್ಪ ಗೌಡ ಶಾಂತಿಲ ಸ್ವಾಗತಿಸಿದರು. ಯುವ ಘಟಕದ ಅಧ್ಯಕ್ಷ ದಿನೇಶ್ ಮಾಡ್ತೆಲು ವಂದಿಸಿದರು. ಯತೀಶ್ ಪಾದೆ, ಜಲಜಾಕ್ಷಿ ಪೊನ್ನೆತ್ತಡಿ ಮತ್ತು ರವಿಕಲಾ ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ಘಟಕದ ಅಧ್ಯಕ್ಷ ಅಮಿತಾ ಗೋಪಾಲಕೃಷ್ಣ ಉಪಸ್ಥಿತರಿದ್ದರು.










