Monday, July 20, 2026
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮಹಿಳಾ ಘಟಕದ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಭಜನಾ ಸೇವೆ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಮಹಿಳಾ ಘಟಕದ ನೇತೃತ್ವದಲ್ಲಿ ಅಕ್ಷಯ ಭಜನಾ ಮಂಡಳಿಯ ತರಬೇತಿ ಪಡೆದ ಸದಸ್ಯರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಭಜನಾ ಸೇವೆ ನಡೆಸಲಾಯಿತು.

ಕಾರ್ಯಕ್ರಮವನ್ನು ವಿಟ್ಲ ಅರಮನೆಯ ಜಯರಾಮ ಬಲ್ಲಾಳರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ತರಬೇತಿದಾರ ದಿನೇಶ್ ಮಾಮೇಶ್ವರ, ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಪಡಿಬಾಗಿಲು, ಕಾರ್ಯದರ್ಶಿ ಹರಿನಾಕ್ಷಿ ಗಿರಿನಿವಾಸ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ, ಇರಂದೂರು ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಗಿರಿನಿವಾಸ, ನಿಕಟ ಪೂರ್ವ ಅಧ್ಯಕ್ಷ ಮೋನಪ್ಪ ಗೌಡ ಶಿವಾಜಿನಗರ, ಮಹಿಳಾ ಘಟಕ ಅಧ್ಯಕ್ಷೆ ಅಮಿತಾ ಕೃಷ್ಣ ಮತ್ತು ಗೋಪಾಲಕೃಷ್ಣ ಉಪಸ್ಥಿತರಿದ್ದರು.

- Advertisement -

Related news

error: Content is protected !!