Sunday, November 3, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ವಿಟ್ಲದ ಹಿಂದೂ ರುದ್ರ ಭೂಮಿಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಗರ ಮಂಡಲದ ಯುವ ಮೋರ್ಚಾದ ಅಧ್ಯಕ್ಷ ನಿತೇಶ್ ಕಲ್ಲೇಗ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು, ಮಂಡಲದ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ವಿಟ್ಲ ಮತ್ತು ಪುನೀತ್ ಮಾಡತ್ತಾರು, ಪುತ್ತೂರು ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಮರುವಾಳ ,ಸಂತೋಷ್ ಪರಂದಾಜೆ , ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ ಆಲಂಗರು, ಪ್ರಧಾನ ಕಾರ್ಯದರ್ಶಿ ಹರೀಶ್ ವಿಟ್ಲ, ವಿಟ್ಲ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಗೌಡ, ಶಿಶಿರ್, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಗೋಪಿಕೃಷ್ಣ, ಕೇಪು ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ , ಕರವೀರ ಹಿರಿಯರಾದ ಮೋಹನ್ ದಾಸ್ ಉಕ್ಕುಡ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಮಶಾನದ ಕಾರ್ಮಿಕರಾದ ಪುರಂದರ ಹಾಗೂ ಪೌರಕಾರ್ಮಿಕ ಗುಂಡನಾಯಕ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಹರೀಶ್ ಪೂಜಾರಿ ಮರುವಾಳ ನಿರೂಪಿಸಿ ಸ್ವಾಗತಿಸಿದರು, ರವಿಶಂಕರ್ ವಿಟ್ಲ ಧನ್ಯವಾದಗೈದರು.

- Advertisement -

Related news

error: Content is protected !!