Saturday, April 20, 2024
spot_imgspot_img
spot_imgspot_img

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಡಾಕ್ಟರ್ ಅರೆಸ್ಟ್‌

- Advertisement -G L Acharya panikkar
- Advertisement -

ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ಥೆಯ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ. 14 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅನುಷ್‌ಗೆ ಎರಡು ಮದುವೆಯಾಗಿದ್ದು ಮೊದಲ ಪತ್ನಿಯಿಂದ ದೂರವಾಗಿದ್ದಾನೆ ಎನ್ನಲಾಗಿದೆ. ಆರೋಪಿ ಅನುಷ್ ಈ ಹಿಂದೆಯೂ ಇಂತಹದ್ದೇ ಕೃತ್ಯ ಎಸಗಿದ್ದ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!