Thursday, May 2, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೇಸಿಐ ಇದರ ಸಂಯುಕ್ತ ಆಶ್ರಯದಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ

- Advertisement -G L Acharya panikkar
- Advertisement -
vtv vitla

ವಿಟ್ಲ: ಜಿಲ್ಲಾ ಪಂಚಾಯತ್ ಮಂಗಳೂರು ದ.ಕ. ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಮಂಗಳೂರು ಕಾರ್ಡಿಯಾಲಜಿ ಡೋರ್‌ಸ್ಟೆಪ್‌ ಫೌಂಡೇಶನ್ (CAD) ಸಂಸ್ಥೆ ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೇಸಿಐ ಇದರ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞರಾದ ಡಾ| ಪದ್ಮನಾಭ ಕಾಮತ್ ಹಾಗೂ ಅವರ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರವು ಜೂ. 21ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12-30 ತನಕ ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ನಡೆಯಲಿದೆ.

ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುವವರು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು, ಹೃದಯದ ಚಿಕಿತ್ಸೆಗೆ ಒಳಗಾದವರು (ಅಂಜಿಯೋಪ್ಲಾಸ್ಟ್ /ಬೈಪಾಸ್), ಕಾಂಜಿನಿಟಲ್ ಹಾರ್ಟ್ & ರುಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದವರು, ಹೃದಯ ತೊಂದರೆಗೆ ಸೆಕೆಂಡ್ ಅಭಿಪ್ರಾಯ ಬೇಕಾದವರು ಇವರುಗಳಿಗೆ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!