Sunday, June 21, 2026
spot_imgspot_img
spot_imgspot_img

ವಿಟ್ಲ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ‘ಯೋಗ ಡೇ ‘ ಆಚರಣೆ

- Advertisement -
- Advertisement -

ವಿಟ್ಲ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜೂನ್ 20 ರಂದು ‘ಯೋಗ ಡೇ ‘ಅನ್ನು ಆಚರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಪ್ರಕಾಶ್ ಅಣ್ಣಡ್ಕ ಸಂಚಾಲಕರು ವಿಟ್ಲ ಪತಂಜಲಿ ಯೋಗ ಸಮಿತಿ ಹಾಗೂ ಅವರ ತಂಡದವರು ಭಾಗವಹಿಸಿದ್ದರು. ಮುಖ್ಯ ಅತಿಥಿ, ಪ್ರಕಾಶ್ ಅಣ್ಣಡ್ಕ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ದೇಹ ಮತ್ತು ಮನಸ್ಸುಗಳ ಏಕಾಗ್ರತೆಯೇ ಯೋಗ ‘, ನಿರಂತರ ಯೋಗಭ್ಯಾಸವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿದೆ ಹಾಗೂ ಒತ್ತಡ ನಿವಾರಣೆಗೆ ಸಹಾಯಕವಾಗಿದೆ ಎಂದು ಹೇಳಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಹಾನುಭೂತಿಯನ್ನು ಬೆಳೆಸಿಕೊಳ್ಳಬೇಕೆಂದು, ಇದು ಯೋಗದ ನಿಜವಾದ ಉದ್ದೇಶವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಶಾಲೆಯ ಯೋಗ ತರಬೇತುದಾರರಾದ ಶ್ರೀ ಕುಶಲ ಹಾಗೂ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ ,ಕಾರ್ಯದರ್ಶಿಯಾದ ರಾಘವೇಂದ್ರ ಪೈ ,ಹಾಗೂ ಖಜಾಂಚಿ ಪ್ರಭಾಕರ ಶೆಟ್ಟಿ , ಜೇಸಿ ವಲಯಾಧ್ಯಕ್ಷರಾದ ಸಂತೋಷ್ ಶೆಟ್ಟಿ, ಶಾಲಾ ಪ್ರಾಂಶುಪಾಲರು ಜಯರಾಮ ರೈ, ಉಪ ಪ್ರಾಂಶುಪಾಲೆಯರಾದ ಕವಿತಾ ಮತ್ತು ಹೇಮಲತಾ,ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. 10 ನೇ ತರಗತಿಯ ವಿದ್ಯಾರ್ಥಿನಿಯರಾದ ಪ್ರೀಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಹಾಗೂ ಖುಷಿ ಕುಲಾಲ್ ಕೆ ಸ್ವಾಗತಿಸಿದರು. ಯೋಗ ಸಂಸ್ಥೆಯ ಶಿಕ್ಷಕ ವೃಂದದವರು ಎಲ್ಲ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಪ್ರಾಂಶುಪಾಲರು ಜಯರಾಮ ರೈ, ಸಹ ಶಿಕ್ಷಕರಾದ ಸೌಮ್ಯ ಹಾಗೂ ನಮಿತಾ ಸಂಯೋಜಿಸಿದರು.

- Advertisement -

Related news

error: Content is protected !!