Friday, July 24, 2026
spot_imgspot_img
spot_imgspot_img

ವಿಟ್ಲ: ಸುವರ್ಣ ಸಂಭ್ರಮದಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್..! – ಪೌರಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ

- Advertisement -
- Advertisement -

ವಿಟ್ಲ: 50 ನೇ ವರ್ಷದ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಇದರ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸುರಕ್ಷಾ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ವಿಟ್ಲ ಇದರ ಸಧ್ಯಕ್ಷ ಮೋನಪ್ಪ ಗೌಡ ವಹಿಸಿದ್ದರು. ಅತಿಥಿಗಳಾಗಿ ಲಯನ್ಸ್ ಜಿಲ್ಲೆ 317 ಡಿ ಇದರ ನಿಕಟಪೂರ್ವ ರಾಜ್ಯಪಾಲ ಡಾ ಗೀತಾ ಪ್ರಕಾಶ್, ಲಯನ್ಸ್ ಕ್ಲಬ್ ವಿಟ್ಲ ಇದರ ಸ್ಥಾಪಕಾಧ್ಯಕ್ಷ ಸಿ ವಿ ಗೋಪಾಲಕೃಷ್ಣ ಭಟ್ ಆಗಮಿಸಿದ್ದರು.

ಈ ಕಾರ್ಯಕ್ರಮಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಗೆ ಆಹಾರದ ಕಿಟ್ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು. ಹಾಗೂ ಪಂಚಾಯತ್‌ನ ಸಿಬ್ಬಂದಿ ಪೂವಪ್ಪ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಈ ವೇಳೆ ಲಯನ್ಸ್ ಕ್ಲಬ್ ವಿಟ್ಲ ಇದರ ಕಾರ್ಯದರ್ಶಿ ಲೂಯಿಸ್, ಕೋಶಾಧಿಕಾರಿ ಗಂಗಾಧರ್, ಡಾ. ಶರತ್ ಚಂದ್ರ ಶೆಟ್ಟಿ, ಲಯನ್ಸ್ ಹಾಗೂ ಲಿಯೋ ಕ್ಲಬ್‌ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!