





ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯು ದಿನಾಂಕ 06/01/2026 ರಂದು ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನ ಸಭಾಭವನದಲ್ಲಿ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಜಯಪ್ರಕಾಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಕ್ಕಳ ಗ್ರಾಮ ಸಭೆಯು ಸ ಹಿ ಪ್ರಾ ಶಾಲೆ ಕಂಬಳಬೆಟ್ಟು ಇಲ್ಲಿನ ವಿದ್ಯಾರ್ಥಿ ನಾಯಕಿ ಕು| ವನ್ಯಶ್ರೀ ಇವರ ಅಧ್ಯಕ್ಷತೆಯಲ್ಲಿ ನಡೆಯಿತು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಜಯ ಕೆ ಇವರು ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಣ ಇಲಾಖಾ ವತಿಯಿಂದ ಕಂಬಳಬೆಟ್ಟು ಸಿ ಆರ್ ಪಿ ಶ್ರೀಮತಿ ಜ್ಯೋತಿ ಇವರು ಮಕ್ಕಳ ರಕ್ಷಣಾ ಸಮಿತಿ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.






ಮಹಿಳಾ ಸಾಂತ್ವಾನ ಕೇಂದ್ರದ ಅಧಿಕಾರಿಯಾದ ಶ್ರೀಮತಿ ವಿದ್ಯಾ ರವರು ಮಕ್ಕಳ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ವಿವರಣೆ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿಗಳಾದ ಶ್ರೀ ಸಂಜಯ್ ಇವರು ಮಾನಸಿಕ ದೈಹಿಕ ಆರೋಗ್ಯದ ಬಗ್ಗೆ ಉತ್ತಮವಾಗಿ ವಿವರಣೆ ನೀಡಿದರು. ವಿಟ್ಲ ಆರಕ್ಷಕ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶ್ರೀ ಹರೀಶ್ ಇವರು ಪೋಕ್ಸೋ ಕಾಯ್ದೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ನೈಜ ಘಟನೆಗಳೊಂದಿಗೆ ಉದಾಹಣೆಯನ್ನು ನೀಡಿ ಉತ್ತಮ ವಿವರಣೆ ನೀಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಸೋಮಕ್ಕ ಇವರು ಮಹಿಳಾ ಮತ್ತು ಮಕ್ಕಳ ಸಮಿತಿಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಂದ ಬೇಡಿಕೆಗಳನ್ನು ಪಂಚಾಯತ್ ಅಧ್ಯಕ್ಷರಿಗೆ ಸಲ್ಲಿಸಲಾಯಿತು. ಸಭೆಯಲ್ಲಿ ಪಂಚಾಯತ್ ಸದಸ್ಯರಾದ ಶ್ರೀ ಮಹಾಬಲೇಶ್ವರ ಭಟ್, ಶ್ರೀ ಎಲ್ಯಣ್ಣ ಪೂಜಾರಿ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಮರಿಯಮ್ಮ ,ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ,ಚಿಗುರು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಗ್ರಾಮಸ್ಥರು, ವಿದ್ಯಾರ್ಥಿಗಳ ಪೋಷಕರು, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ನಾಟೆಕಲ್ಲು ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಕುಂಡಡ್ಕ ಕುಶಾಲನಗರ ಶಾಲಾ ವಿದ್ಯಾರ್ಥಿ ಸಭೆಯನ್ನು ಸ್ವಾಗತಿಸಿದರು , ಕಂಬಳಬೆಟ್ಟು ಜನಪ್ರಿಯ ಶಾಲೆಯ ವಿದ್ಯಾರ್ಥಿನಿ ಧನ್ಯವಾದ ಸಮರ್ಪಿಸಿದರು, ನಾಟೆಕಲ್ಲು ಶಾಲೆಯ ಮುಖ್ಯಶಿಕಕರಾದ ಶ್ರೀ ಶ್ರೀಪತಿ ನಾಯಕ್ ಡಿ ಇವರು ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು








