Wednesday, April 23, 2025
spot_imgspot_img
spot_imgspot_img

ವಿಟ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮ

- Advertisement -
- Advertisement -
vtv vitla

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಸಮೂಹ ಕೇಂದ್ರ ವಿಟ್ಲ ಇವುಗಳ ಸಹಯೋಗದೊಂದಿಗೆ 2023-24ನೇ ಸಾಲಿನ ವಿಟ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ವಿಟ್ಲದಲ್ಲಿ ನಡೆಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ರವಿಶಂಕರ್ ಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಕೌನ್ಸಿಲರ್ ರವಿಪ್ರಕಾಶ್ ವಿಟ್ಲ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳದ ಶಿಕ್ಷಣ ಸಂಯೋಜಕರಾದ ಸುಧಾ ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಬಿಂದು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿಶಂಕರ್ ಸಿ, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರತಿನಿಧಿಯಾದ ಚಂದಳಿಕೆ ಶಾಲಾ ಮುಖ್ಯಶಿಕ್ಷಕರು ವಿಶ್ವನಾಥ ಗೌಡ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಾರಿಜಾ ಕುಮಾರಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಪ್ರಮುಖ ಮುಖ್ಯ ಶಿಕ್ಷಕಿ ವಾರಿಜಾ ಕುಮಾರಿ ಸ್ವಾಗತಿಸಿ, ಪ್ರೌಢ ಶಾಲಾ ಪ್ರಮುಖ ಮುಖ್ಯ ಶಿಕ್ಷಕಿ ಅನ್ನಪೂರ್ಣ ಧನ್ಯವಾದಗೈದರು.

- Advertisement -

Related news

error: Content is protected !!