




ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೌಜನ್ಯ ಸಾವಿಗೆ ನ್ಯಾಯ ಒದಗಿಸಲು ಸೆ.24ರಂದು ಪ್ರತಿಭಟನಾ ಸಭೆಯು ವಿಟ್ಲದ ಬಸ್‌ಸ್ಟ್ಯಾಂಡ್ ಬಳಿ ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯು ವಿಟ್ಲದ ಪಂಚಮಿ ಭವನದಲ್ಲಿ ನಡೆಯಿತು.
ವಿಟ್ಲ ಪರಿಸರದ ಮಾಣಿ, ಕಲ್ಲಡ್ಕ, ಸಾಲೆತ್ತೂರು, ಮಂಚಿ, ಪೆರುವಾಯಿ, ಕನ್ಯಾನ, ಅಡ್ಯನಡ್ಕ, ಕೇಪು, ನೀರ್ಕಜೆಯಲ್ಲಿ ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯನ್ನು ರಚಿಸಿದ್ದು, ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಸೆ.24ರಂದು ಸಂಜೆ 3.30ಕ್ಕೆ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದು, ವಿಟ್ಲ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಬಳಿಕ ವಿಟ್ಲದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಹೊರಟು ವಿಟ್ಲದ ಖಾಸಗಿ ಬಸ್‌ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಈ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ಗಿರೀಶ್ ಮಟ್ಟಣ್ಣವರ್ ಭಾಗವಹಿಸಲಿದ್ದಾರೆ ಎಂದು ದೇವಿಪ್ರಸಾದ್ ಶೆಟ್ಟಿ ಬೆಂಞತ್ತಿಮಾರು ಗುತ್ತು ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿಕಾಗೋಷ್ಠಿಯಲ್ಲಿ ದೇವಿಪ್ರಸಾದ್ ಶೆಟ್ಟಿ ಬೆಂಞತ್ತಿಮಾರು ಗುತ್ತು, ಸೇಸಪ್ಪ ಬೆದ್ರಕಾಡು, ಚೇತನ್ ಕಡಂಬು, ಅಜಯ್ ಕೇಪು, ಚಂದ್ರಶೇಖರ, ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.