Saturday, July 25, 2026
spot_imgspot_img
spot_imgspot_img

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ- ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

- Advertisement -
- Advertisement -

ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಫೆ.23(ಇಂದು) ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀ ನರ್ಸಪ್ಪ ಪೂಜಾರಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಜನ ಫಲಾನುಭವಿಗಳು ಪ್ರಯೋಜನವನ್ನು ಪಡೆದರು. ನಿರ್ದೇಶಕರಾದ ಶ್ರೀ ಮೋಹನದಾಸ್ ಉಕ್ಕುಡ ಇವರು ಎಲ್ಲರನ್ನು ಸ್ವಾಗತಿಸಿದರು. ಉಪಾಧ್ಯಕ್ಷರಾದ ಶ್ರೀಮತಿ ಮಂಜುಳ, ನಿರ್ದೇಶಕರುಗಳಾದ ಸದಾನಂದ ಸೇರಾಜೆ, ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವಿಟ್ಲ ವಲಯ ಮೇಲ್ವಿಚಾರಕರು ಯೋಗೀಶ್ ಹೆಚ್, ಶ್ರೀಮತಿ ಸಂಧ್ಯಾಮೋಹನ, ಹರೀಶ ನಾಯ್ಕ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ವರ ಬಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ಮನೋಹರ್, ಡಾ| ಪ್ರಶಾಂತ್ ಹಾಗೂ ಇತರ ಸಿಬ್ಬಂದಿ ವರ್ಗದವರು ಕಣ್ಣಿನ ಚಿಕಿತ್ಸಾ ಹಾಗೂ ಸಲಹೆಗಳನ್ನು ಈ ಶಿಬಿರದಲ್ಲಿ ನೀಡಿದರು. ರೋಟರಿ ಕ್ಲಬ್ ಪುತ್ತೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಇತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು, ಸಹಕಾರ ಸಂಘದ ಸಿಬ್ಬಂದಿಗಳು ಸಹಕರಿಸಿದರು.

- Advertisement -

Related news

error: Content is protected !!