Saturday, April 27, 2024
spot_imgspot_img
spot_imgspot_img

ವಿಟ್ಲ: ಸರಕಾರಿ ಶಾಲೆಯ ಗೋಡೆಗಳಲ್ಲಿ ಅಶ್ಲೀಲ ಬರವಣಿಗೆ, ಕಿಟಕಿಗಳಿಗೆ ಹಾನಿ; ಕಿಡಿಗೇಡಿಗಳ ವಿರುದ್ದ ಪ್ರಕರಣ ದಾಖಲು

- Advertisement -G L Acharya panikkar
- Advertisement -

ವಿಟ್ಲ: ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ಶಾಲೆಯ ತರಗತಿ ಕಿಟಕಿಗಳಿಗೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ಸೆ. 4ರಂದು ಬೆಳಿಗ್ಗೆ ಶಾಲಾ ಶಿಕ್ಷಕರು, ಮಕ್ಕಳು ಎಂದಿನಂತೆ ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆನ್ನಲಾಗಿದೆ. ಸೆ.3ರಂದು ಶಾಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾಟ ನಡೆದಿದ್ದು, ಬಳಿಕ ಯಾರೋ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದಾರೆನ್ನಲಾಗಿದೆ.

ಕಿಟಕಿಗಳಿಗೆ ಹಾನಿ ಮಾಡಿ, ಶಾಲಾ ಗೋಡೆಗಳಲ್ಲಿ ಅಶ್ಲೀಲ ಬರವಣಿಗೆ, ಶಾಲೆಯ ತರಗತಿ ಕೊಠಡಿಗಳ ಬಾಗಿಲಿಗೆ ಮೊಟ್ಟೆ ಎಸೆದು ದುಷ್ಕೃತ್ಯ ಎಸಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!