Sunday, July 6, 2025
spot_imgspot_img
spot_imgspot_img

ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವಿಟ್ಲ ಘಟಕದ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ “ದೇವ ಭೇಷಜೋಧ್ಧರಣ” ಯಕ್ಷಗಾನ ಬಯಲಾಟ

- Advertisement -
- Advertisement -

ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವಿಟ್ಲ ಘಟಕ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃತ ಕ್ಷೇತ್ರ ಪಾವಂಜೆ, ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಅಮೋಘ ಭಾಗವತಿಕೆಯೊಂದಿಗೆ ಮೇ. 01ರಂದು ಅಪರಾಹ್ನ 3.00ರಿಂದ ರಾತ್ರಿ 12.30ರ ತನಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೊ. ಅಮೃತ ಸೋಮೇಶ್ವರ ವಿರಚಿತ “ದೇವ ಭೇಷಜೋಧ್ದರಣ” ಯಕ್ಷಗಾನ ಬಯಲಾಟ ನಡೆಯಲಿದೆ.

ಅಪರಾಹ್ನ 3.00ರಿಂದ ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ.) ವಿಟ್ಲ ಇದರ ಕಲಿಕಾ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ “ವೀರಮಣಿ ಕಾಳಗ” ನಡೆಯಲಿದ್ದು, ರಾತ್ರಿ 8 ರಿಂದ ಸಭಾ ಕಾರ್ಯಕ್ರಮ, ಗೌರವಾರ್ಪಣೆ ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣಾ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!