Wednesday, April 24, 2024
spot_imgspot_img
spot_imgspot_img

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

- Advertisement -G L Acharya panikkar
- Advertisement -

ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ- ರವಿ ಮುಂಗ್ಲಿಮನೆ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಮಾತನಾಡಿ ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ ಮಾಡುತ್ತದೆ. ಶಾಲಾ ಕಾಲೇಜು ಮಟ್ಟದ ಕ್ರೀಡಾ ಕೂಟಗಳಿಂದ ಸ್ನೇಹ ಸೌಹಾರ್ದತೆಗಳು ಏರ್ಪಡುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಡೆರಿಕ್ ಚೆಸ್ ಸ್ಕೂಲ್ ನ ನಿರ್ದೇಶಕ ಪ್ರಸನ್ನ ರಾವ್, ಕಾಲೇಜಿನ ಉಪನ್ಯಾಸಕರಾದ ನಾಗರಾಜ್ ನಾಯ್ಕ್,ವಿಶ್ವನಾಥ್ , ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಉಪಸ್ಥಿತರಿದ್ದರು.

ಜಿಲ್ಲೆಯ ಸುಮಾರು ಒಂಭತ್ತು ಕಾಲೇಜುಗಳ ತಂಡವು ಸ್ಫರ್ಧೆಯಲ್ಲಿ ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಮತ್ತು ಮೂಡಬಿದಿರೆಯ ಜೈನ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿದೆ. ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿದೆ.

- Advertisement -

Related news

error: Content is protected !!