Wednesday, June 24, 2026
spot_imgspot_img
spot_imgspot_img

ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ

- Advertisement -
- Advertisement -

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಕ್ಕೆಪದವಿನ ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನಗಳಿಸಿದೆ.

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸೃಜನಾ, ಕಲಾ ವಿಭಾಗದ ಚೈತ್ರಾ, ಮತ್ತು ವಿಜ್ಞಾನ ವಿಭಾಗದ ವಿದ್ಯಾ ಇವರು ಪುತ್ತೂರು ತಾಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ ಚೈತ್ರಾ(ಬಂಟ್ವಾಳ ತಾಲೂಕಿನ ಪೆರ್ನೆಯ ಕೃಷ್ಣಪ್ಪ ಪೂಜಾರಿ ಮತ್ತು ಸುನಿತಾ ದಂಪತಿಯ ಪುತ್ರಿ)ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ|ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- Advertisement -

Related news

error: Content is protected !!