ವಿವೇಕಾನಂದ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆ (ರಿ.), ವಿವೇಕನಗರ, ದಕ್ಷಿಣ ಕನ್ನಡ ವತಿಯಿಂದ ಡಿ.27, 2025 (ಶನಿವಾರ) ರಂದು ಸಂಸ್ಥೆಯ ಆವರಣದಲ್ಲಿ ಸಂಸ್ಥಾ ತಿಕ ಸಮಾರಂಭ – ವಾಷಿಕೋತ್ಸವ 2025 ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಗಿದೆ.

ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಪ್ರಾರಂಭವಾಗಲಿದ್ದು, ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳು, ಶಿಕ್ಷಣದ ಮಹತ್ವ, ಶಿಸ್ತು ಮತ್ತು ಮೌಲ್ಯಾಧಾರಿತ ಬದುಕಿನ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಸಂಜೆ 3.15ಕ್ಕೆ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರಿಗೆ ಸಮರ್ಪಿತವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಶೇಷ ಪ್ರದರ್ಶನಗಳು ನಡೆಯಲಿವೆ.
ಈ ಕಾರ್ಯಕ್ರಮದಲ್ಲಿ ಗಣಧರ ಪಂಡಿತ್ (ಪ್ರಾಂಶುಪಾಲರು) ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸ್ವಾಮಿ ವಿವೇಕಾನಂದರ ತತ್ವಚಿಂತನೆಗಳು ಇಂದಿನ ವಿದ್ಯಾರ್ಥಿ ಜೀವನಕ್ಕೆ ಹೇಗೆ ದಾರಿ ತೋರಿಸುತ್ತವೆ ಎಂಬುದರ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಕೆ. ಎಂ. ಕೃಷ್ಣ ಭಟ್ ವಹಿಸಲಿದ್ದಾರೆ.
ವೇದಿಕೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಪ್ರಕಾಶ್ ಶೆಟ್ಟರ್ ನಾಯಕ್, ದಿವಾಕರ್ ದಾಸ್ ನೆಲ್ಲಾಜೆ, ವಿಷ್ಣು ಪ್ರಸಾದ್ ಪಿ, ಸತೀಶ್ ಕುಮಾರ್ ರೈ, ಕುಮಾರಿಕಾ ಭಾರದ್ವಾಜ್ (ಹಿರಿಯ ವಿದ್ಯಾರ್ಥಿನಿ) ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರುವರು.
ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಯೋಗ ಪ್ರದರ್ಶನ, ಚಿತ್ರಕಲೆ, ಕೈತೋಟ ಮತ್ತು ವಿಜ್ಞಾನ ಚಟುವಟಿಕೆಗಳ ಪ್ರದರ್ಶನ ನಡೆಯಲಿದ್ದು, ಮಕ್ಕಳ ಸರ್ವಾಂಗೀಣ ಪ್ರತಿಭೆ ಅನಾವರಣಗೊಳ್ಳಲಿದೆ. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಪಠ್ಯೇತರ ಸಾಧನೆಗಳನ್ನು ಗುರುತಿಸಿ ಬಹುಮಾನ ವಿತರಿಸಲಾಗುವುದು.
ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರು, ಪೋಷಕರು ಹಾಗೂ ಶಿಕ್ಷಣಾಸಕ್ತರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.








