Monday, June 15, 2026
spot_imgspot_img
spot_imgspot_img

ವಿಯೆನ್ನಾಉಗ್ರರ ದಾಳಿ ಪ್ರಕರಣ-ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ(ನ.3): ಆಸ್ಟ್ರಿಯಾದ ವಿಯೆನ್ನಾದಲ್ಲಿ ಉಗ್ರರು ಸುಮಾರು 6 ಪ್ರದೇಶಗಳಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು 7ಕ್ಕೂ ಹೆಚ್ಚು ಜನರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯ ಕುರಿತು ಪ್ರಧಾನಿ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವೀಟ್ ನಲ್ಲಿ ವಿಯೆನ್ನಾದಲ್ಲಿ ನಡೆದ ಉಗ್ರರ ದಾಳಿಯ ವಿಚಾರ ತಿಳಿದು ತೀವ್ರವಾದ ಆತಂಕ ಮತ್ತು ಬೇಸರವಾಯಿತು. ಇಂಥ ಕೆಟ್ಟ ಸಮಯದಲ್ಲಿ ಭಾರತ ಆಸ್ಟ್ರಿಯಾ ಜೊತೆಗೆ ನಿಲ್ಲಲಿದೆ ಎಂದಿದ್ದಾರೆ. ಅಲ್ಲದೇ ಘಟನೆಯಲ್ಲಿ ಸಾವನ್ನಪ್ಪಿದವರ ಗಾಯಗೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!