Thursday, July 23, 2026
spot_imgspot_img
spot_imgspot_img

ವಾಲಿಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ

- Advertisement -
- Advertisement -

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆಯ್ಯೂರಿನ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ತಂಡದಲ್ಲಿ ಹೃತಿಕ್ ಎಂ, ಚರಣ್ ಬಿ.ಜೆ, ಅದಿತ್, ಚರಿತ್ ಪ್ರಕಾಶ್ ,ಗಗನ್‌ಯಾದವ್ ಪಿ.ಎಂ, ಚಿರಾಗ್ ಡಿ. ಆರ್, ಪ್ರಣವ ಎಸ್,ಯೋಗೀಶ ವೈ. ಎಸ್, ರಜನೀಶ್ , ಸುಶಾಂತ್ ಬಿ.ಎಸ್, ವಾಸುದೇವ ತಿಲಕ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- Advertisement -

Related news

error: Content is protected !!