Saturday, June 6, 2026
spot_imgspot_img
spot_imgspot_img

ಜೂ.19ರಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

- Advertisement -
- Advertisement -

ಗುಜರಾತ್ ಕೇರಳ , ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಜೂನ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗುಜರಾತ್‌ನಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ ನಿಧನದ ಬಳಿಕ ಕಾಡಿ ಕ್ಷೇತ್ರದ ಸ್ಥಾನ ತೆರವಾಗಿತ್ತು. ಅಲ್ಲದೇ ವಿಶಾವದರ್ ಕ್ಷೇತ್ರದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡುಭಾಯ್ ಅವರ ರಾಜೀನಾಮೆಯಿಂದಾಗಿ ಆ ಕ್ಷೇತ್ರದ ಸ್ಥಾನ ತೆರವಾಗಿತ್ತು. ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಪಿ.ವಿ ಅನ್ವರ್ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ. ಪಂಜಾಬ್‌ನ ಲುಧಿಯಾನ ಕ್ಷೇತ್ರದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. ಪಶ್ಚಿಮ ಬಂಗಾಳದ ಕಾಳಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಾಸಿರುದ್ದೀನ್ ಅಹಮದ್ ಅವರ ನಿಧನದಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಜೂ.19ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

- Advertisement -

Related news

error: Content is protected !!